ಚಿಕ್ಕಬಳ್ಳಾಪುರ : 2024-25ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ/ಕಾಲೇಜುಗಳ ಪ್ರಥಮ ಪಿ.ಯು.ಸಿ (ವಿಜ್ಞಾನ) ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಮೇ 27 ರವರೆಗೆ ಸಂಬಂಧಪಟ್ಟ ಮುರಾರ್ಜಿದೇಸಾಯಿ ಪಿ.ಯು.ಸಿ ಕಾಲೇಜುಗಳಲ್ಲಿ ಅಥವಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಸಂಬಂಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಮುರಾರ್ಜಿದೇಸಾಯಿ ಪಿಯುಸಿ ವಸತಿ ಕಾಲೇಜಿನ ಪ್ರಾಂಶುಪಾಲರ ಮೊ. 8867568059, 9036800610 ಮತ್ತು ಹಿಂದುಳಿದ ವರ್ಗಗಳ ಮೊರಾರ್ಜಿದೇಸಾಯಿ ಪಿ.ಯು.ಸಿ. ವಸತಿ ಕಾಲೇಜಿನ ಪ್ರಾಂಶುಪಾಲರ ಮೊ.ನಂ. 9731613955 ಗೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ತೇಜಾನಂದರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.