ಚಿಕ್ಕಬಳ್ಳಾಪುರ: 2024 ನೇ ಸಾಲಿನ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇದರ ಸದುಪಯೋಗಪಡೆದುಕೊಳ್ಳಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್ಕುಮಾರ್ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ `ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2024 ನೇ ಸಾಲಿನ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಿ.ಯು.ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದೆ. ಅರ್ಜಿಯನ್ನು Online link: https://bit.ly/ksgea2024pp ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಚಿಕ್ಕಬಳ್ಳಾಪುರ ದೂ.ಸಂಖ್ಯೆ: 9964183913, 9148611951 ಸಂಪರ್ಕಿಸುವುದು ಎಂದು ಅವರು ಕೋರಿದ್ದಾರೆ.
Leave a comment