ಪ್ರತಿನಿಧಿ ವರದಿ ಚಿಕ್ಕಮಗಳೂರು
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್, ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ನಲ್ಲಿ ಆ.31 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಅಥವಾ ನಿಗಮದ ದೂ.ಸಂ.08262-295815 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವಿಶ್ವಕರ್ಮ ಸಮುದಾಯದಿಂದ ಅರ್ಜಿ
ಪ್ರತಿನಿಧಿ ವರದಿ ಚಿಕ್ಕಮಗಳೂರು
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸೇವಾ ಸಿಂಧೂ ಪೋರ್ಟಲ್, ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆ.31 ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಪ್ರತಿನಿಧಿ ವರದಿ ಚಿಕ್ಕಮಗಳೂರು
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನ ವಿದ್ಯಾರ್ಥಿಗಳು ಪ್ರಿ-ಮೆಟ್ರಿಕ್, ಪೋಸ್ಟ್-ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್ಸೈಟ್ ಮೂಲಕ ಪ್ರಿ-ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಆ.31 ರೊಳಗೆ ಮತ್ತು ಪೋಸ್ಟ್ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿಗಳು ಅ.31ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂ:08262-228171, ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳ ವಿವರ: ಚಿಕ್ಕಮಗಳೂರು ತಾ.ಮೋಹನ್ ಗೌಡ ಮೊ.ಸಂ.9148446757, ಕಡೂರು ತಾ.ಕು.ಶಾನ್ವಾಜ್ ಮೊ.ಸಂ.9036946273, ಮೂಡಿಗೆರೆ ತಾ.ಚಂಪಾ ಕೆ.ಬಿ.ಮೊ.ಸಂ.9482740466, ಕೊಪ್ಪ ತಾ.ಮೋಹನ್ ಡಿ.ಆರ್. ಮೊ.ಸಂ.9448223239, ತರೀಕೆರೆ ತಾ.ಅಕ್ರಂಬಾಷ ಮೊ.ಸಂ.9632503867, ಶೃಂಗೇರಿ ತಾ.ಸಾಮ್ರಾಟ್ ಜಿ.ಎಲ್. ಮೊ.ಸಂ.7975132606, ನ.ರಾ.ಪುರ ತಾ. ಜೆಸ್ಮಿನ ಫ್ರಾನ್ಸಿಸ್ ಮೊ.ಸಂ.9482853223 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಪ್ಪು ಪದಗಳು
ನಾಗರೀಕ
ಕಛೇರಿ
ಇವರಗಳನ್ನು