ಮಡಿಕೇರಿ: ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಮೀನು ಹಿಡಿಯುವ ಸಲಕರಣೆ ಕಿಟ್ ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಕಿಟ್ ವಿತರಿಸಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಜೂ.29 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಚಿನ್ ತಿಳಿಸಿದ್ದಾರೆ.