ಪ್ರತಿನಿಧಿ ವರದಿ ಚಾಮರಾಜನಗರ
2024ರ ಚಾಮರಾಜನಗರ ದಸರಾ ಮಹೋತ್ಸವವನ್ನು ಅ.7 ರಿಂದ 9ರವರೆಗೆ ಆಯೋಜಿಸಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಬಯಸುವ ಕಲಾವಿದರು, ಕಲಾತಂಡಗಳು, ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು, ಚಿತ್ರಸಂತೆಯಲ್ಲಿ ಭಾಗವಹಿಸುವ ಚಿತ್ರ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅ.7 ರಿಂದ 9ರವರೆಗೆ ವಿಜೃಂಭಣೆಯಿಂದ ಚಾಮರಾಜನಗರ ದಸರಾ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ. ವಿವಿಧ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಾಲಯದ ಬಳಿಯ ವೇದಿಕೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಬಯಸುವ ಕಲಾವಿದರು, ಕಲಾತಂಡಗಳು, ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು, ಚಿತ್ರಸಂತೆಯಲ್ಲಿ ಭಾಗವಹಿಸುವ ಚಿತ್ರ ಕಲಾವಿದರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಚಾಮರಾಜನಗರ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ-104ರಲ್ಲಿ ಹಾಗೂ ವರನಟ ಡಾ.ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ-104ಕ್ಕೆ ಸೆ.12ರೊಳಗೆ ಸಲ್ಲಿಸಬೇಕು. ಇ-ಮೇಲ್ chamarajanagardasaramahostava@gmail.com ಮೂಲಕವು ಅರ್ಜಿಯನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.