ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಅಖಿಲ ಭಾರತ ಹಿಂದು ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ 2ನೇ ದಿನವಾದ ಶನಿವಾರ ನಗರದ ಜಿಲ್ಲಾಧಿಕಾರಿಗೆ ತೆರಳಿದ ಎ.ಎಸ್. ಸತೀಶ್ ಅವರು, ಸ್ಪರ್ಧೆ ಬಯಸಿ ಅಖಿಲ ಭಾರತ ಹಿಂದು ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಸದ್ಯ ಮೈಸೂರು ಲೋಕಸಭಾ ಕ್ಷೇತ್ರದಿಂದ ಈವರೆಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
===============