ಟೀಂ ಇಂಡಿಯಾದ ʼಕೇರಂ ಬಾಲ್ ಸ್ಪೆಷಲಿಸ್ಟ್ʼ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ಗಳ ಗಡಿದಾಟಿದ್ದಾರೆ. ಇಂಗ್ಲೆಂಡ್ ವಿರುದ್ಧ ರಾಜ್ಕೋಟ್ನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡದ ಓಪನಿಂಗ್ ಬ್ಯಾಟರ್ ಝಾಕ್ ಕ್ರಾಲಿ ಅವರ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ಗಳ ಗಡಿದಾಟಿದ ವಿಶ್ವದ 9ನೇ ಹಾಗೂ ಭಾರತದ 2ನೇ ಬೌಲರ್ ಎಂಬ ಹೆಗ್ಗಳಿಕೆ ಪಡೆದರು. ಭಾರತದ ಪರ ಈ ಮೊದಲು ಅನಿಲ್ ಕುಂಬ್ಳೆ(619) ಅವರು ಈ ಸಾಧನೆ ಮಾಡಿದ್ದಾರೆ.