ಏಷ್ಯಾಕಪ್ ನ ಸೂಪರ್ ಫೋರ್ ಹಂತದ 5ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡ ಫೈನಲ್ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅದರಂತೆ ಸೆಪ್ಟೆಂಬರ್ 17 ರಂದು ನಡೆಯಲಿರುವ ಫೈನಲ್ ಫೈಟ್ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯ.
ಇದಕ್ಕೂ ಮುನ್ನ ಭಾರತ ತಂಡವು ಸೂಪರ್-4 ಹಂತದ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಫೈನಲ್ಗೆ ಪ್ರವೇಶಿಸಿತ್ತು. ಇದಾಗ್ಯೂ ಶುಕ್ರವಾರ ನಡೆಯಲಿರುವ ಸೂಪರ್-4 ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಹೀಗಾಗಿ ಈ ಪಂದ್ಯದಿಂದ ಸ್ಟಾರ್ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.
ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.