ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ಸಿದ್ದರಾಂಯ್ಯನವರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ(BJP) ನಾಯಕರು ಭವಿಷ್ಯ ನುಡಿಯುತ್ತಿದ್ದರೆ, ಇತ್ತ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ)(HD ಮಾತ್ರ 2024ರಲ್ಲಿ ಮತ್ತೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ತಮ್ಮ ಬಿಡದಿಯ ತೋಟದ ಮನೆಯಲ್ಲಿ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ (ಡಿಕೆ ಶಿವಕುಮಾರ್) ಅಭ್ಯರ್ಥಿ ಆಗುವುದೇ ಅನುಮಾನ. ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.