ಮಡಿಕೇರಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಮತ್ತು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ 21 ನೇ ಗೌರಮ್ಮ ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭವು ಮೇ21 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎಂ.ಪ್ರವೀಣ್ಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಗಾಳಿಬೀಡು ಜವಹರ್ ನವೋದಯ ವಿದ್ಯಾಲಯದ ಅಧ್ಯಾಪಕರು, ಸಾಹಿತಿ ಮಾರುತಿ ದಾಸಣ್ಣವರ್, ಕುಶಾಲನಗರ ಸಾಹಿತಿ ಮತ್ತು ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಸುನಿತಾ ಲೋಕೇಶ್, ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಸ್.ಸುನೀಲ್ ಕುಮಾರ್, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಮಂಜುನಾಥ್, ಕ.ಸಾ.ಪ.ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್, ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಕುಶಾಲನಗರ ತಾ. ಕ.ಸಾ.ಪ. ಅಧ್ಯಕ್ಷ ಕೆ.ಎಸ್.ನಾಗೇಶ್, ಪ್ರಶಸ್ತಿ ಪುರಸ್ಕೃತರು ಮೂರ್ನಾಡು ಶಿಕ್ಷಕಿ, ಕವಯತ್ರಿ ಕೆ.ಜಿ.ರಮ್ಯ ಇದ್ದರು.