ಮೈಸೂರು: ಬಿಜೆಪಿ ಮಹಾಸಂಪರ್ಕ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನಲ್ಲಿ ಚಾಲನೆ ನೀಡಿದ್ದಾರೆ. ಚಾಮರಾಜ ಕ್ಷೇತ್ರದ ಬೂತ್ ನಂಬರ್ 232 ಮತ್ತು 233 ರಲ್ಲಿ ಚಾಲನೆ. ಕರಪತ್ರ ಹಂಚುವ ಮೂಲಕ ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಈ ವೇಳೆ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ವಿಜಯೇಂದ್ರಗೆ ಸಾಥ್ ನೀಡಿದ್ದಾರೆ. ಇನ್ನು ಬಿವೈ ವಿಜಯೇಂದ್ರ ಅವರು, ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ತೆರಳಿ, ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ರಸ್ತೆ ಅಪಘಾತದಲ್ಲಿಗಾಯಗೊಂಡು, ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ಚನ್ನರಾಜು ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭ ಸ್ಥಳೀಯ ಬಿಜೆಪಿ ನಾಯಕರ ಸಾಥ್ ನೀಡಿದ್ದಾರೆ.