ಶಿವಮೊಗ್ಗ : ಪುತ್ರನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ಸ್ಪರ್ಧೆ ಮಾಡಲು ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಎಲ್ಲವನ್ನೂ ಪರಿಹರಿಸುತ್ತೆ. ಎಲ್ಲದಕ್ಕೂ ಕಾಲವೇ ಉತ್ತರ ನೀಡಲಿದೆ. ಕೆಎಸ್ ಈಶ್ವರಪ್ಪ ಕಿವಿಗೆ ತಪ್ಪು ಮಾಹಿತಿ ಬಿದ್ದಿದೆ. ಬಿ.ಎಸ್ ಯಡಿಯೂರಪ್ಪ ಮಗ ಎಂಬ ಕಾರಣಕ್ಕೆ ನನಗೆ ಸ್ಥಾನ ಸಿಕ್ಕಿಲ್ಲ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ನನಗೂ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಹೈಕಮಾಂಡ್ ನಿರ್ಧಾರ ಒಪ್ಪಿಕೊಳ್ಳಬೇಕು ಎಂದು ಹೇಳಿದರು.