ಬೆಂಗಳೂರು, ಮಾ.05: ಜೈಲಿನಲ್ಲಿರುವ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ಏಳು ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧಕಾರ್ಯ ನಡೆಸಿದೆ. ಎನ್ಐಎ ಅಧಿಕಾರಿಗಳು ನಿನ್ನೆ ರಾತ್ರಿ 8 ಗಂಟೆಗೆ ಪರಪ್ಪನ ಅಗ್ರಹಾರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆವರೆಗು ತನಿಖೆ ನಡೆಸಿದ್ದು, ನಜೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ. ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು 2022ರ ಜುಲೈನಲ್ಲಿ ರಾಜ್ಯ ರಾಜಧಾನಿಯ ತಿಲಕ ನಗರದ ತಿಲಕ ನಗರದ ಬಹು ಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿರುವ ಫ್ಲ್ಯಾಟ್ನಲ್ಲಿ ವಾಸವಾಗಿದ್ದ, ಲಷ್ಕರ್-ಎ-ತೊಯ್ಬಾ (LeT) ಸಂಘಟನೆ ಜೊತೆ ನಂಟು ಹೊಂದಿದ್ದ ಅಖ್ತರ್ ಹುಸೇನ್ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು.