ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು ಏ.04 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಿಂದ ಎನ್ಡಿಎ ಅಭ್ಯರ್ಥಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ ಅವರು, ನಂತರ 10:30ರಿಂದ ಮೆರವಣಿಗೆ ಮೂಲಕ PWD ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿ ಬಳಿಕ ನಾಮಪತ್ರ ಸಲ್ಲಿಸಿದರು. ನಂತರ ರಾಮನಗರ ಆಂಜನೇಯ ದ್ವಾರದ ಮುಂಭಾಗದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ 50 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.