ಬೆಂಗಳೂರು : ಲೋಕಸಭಾ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದೆ. ಈ ನಡುವೆ ಬಿಜೆಪಿ ಬೆಂಬಲಿತ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದ್ದು, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನದ ಮೂಲಕ ರಾಜಧಾನಿಗೆ ತೆರಳಿದ್ದಾರೆ. ಸದ್ಯ, ಬಿಜೆಪಿ ವರಿಷ್ಠರ ಕರೆ ರಾಜ್ಯ ರಾಜಕಾರಣದಲ್ಲಿ ಅದರಲ್ಲಿ ಭಾರೀ ಕುತೂಹಲ ಕೆರಳಿಸಿದೆ.