ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಮುಖಂಡ ರಘು ಕೌಟಿಲ್ಯ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳ ಕೊಲೆ, ಅತ್ಯಾಚಾರಗಳು ಹೆಚ್ಚಾಗಿದೆ. ಒಂದು ಸಮುದಾಯದ ಓಲೈಕೆಗೆ ಸರ್ಕಾರ ಮುಂದಾಗಿದೆ. ನಮ್ಮ ಹೆಣ್ಣು ಮಕ್ಕಳಯನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಇಂತಹ ಸರ್ಕಾರಕ್ಕೆ ಜನರು 26 ತಾರೀಖು ತಕ್ಕ ಪಾಠ ಕಲಿಸುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ ವಿವಿಧ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಬಳಸಿಕೊಂಡಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದೆ. ಹಳೆ ಡಬ್ಬ, ಖಾಲಿ ಸೀಸ ಎಂಬಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ರಾಜ್ಯದಲ್ಲಿಯೂ ಅತಿ ಹೆಚ್ಚು ಸ್ಥಾನವನ್ನ ಬಿಜೆಪಿ ಗೆಲ್ಲಲಿದೆ ಎಂದು ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯಾ ಹೇಳಿದ್ದಾರೆ.