ವಿಜಯಪುರ: ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ (ಮಾರ್ಚ್ 2) ತಡ ರಾತ್ರಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.