ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ಬಿಎಂಎಚ್ಪಿ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಹೆಚ್ಚು ಪ್ರಶಸ್ತಿಗಳಿಸಿದ್ದಾರೆ.
ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯದಲ್ಲಿ ತಂಡ ಪ್ರಥಮ, ಶಟಲ್ ಕಾಕ್ ಮತ್ತು ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿಗಳ ತಂಡ ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದೆ.
ಕ್ರೀಡಾಕೂಟದಲ್ಲಿ ಸಾಧನೆಗೈದ ಈ ಎಲ್ಲ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಕಿರಣ್ ಡಿ. ಕುನ್ನ, ಕಾರ್ಯದರ್ಶಿ ಕರುಣಾಕರ್, ಖಜಾಂಜಿ ಫ್ರಾನ್ಸಿಸ್, ಸದಸ್ಯ ಐ.ಪಾಲರಾಜ್, ವಿ.ಮನೋಹರ್, ಮುಖ್ಯೋಪಾಧ್ಯಾಯರಾದ ಶಶಿಕಲಾ, ಸುಸನ್ನ, ದೈಹಿಕ ಶಿಕ್ಷಣ ಶಿಕ್ಷಕರಾದ ನಿಶಿತಾನಂದ್, ಕುಮಾರ್ ಅಭಿನಂದಿಸಿದ್ದಾರೆ.
25ಕೆಜಿಎಲ್-2 ಫೋಟೋ ಶೀರ್ಷಿಕೆ: ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಹೆಚ್ಚು ಪ್ರಶಸ್ತಿಗಳಿಸಿದ ಕೊಳ್ಳೇಗಾಲ ಪಟ್ಟಣದ ಬಿ.ಎಂ.ಹೆಚ್.ಪಿ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಅಭಿನಂದಿಸಿತು.