ರಾಜ್ಯ ರಾಜಧಾನಿ ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ ಮೇಲೆ ಬಿಎಂಟಿಸಿ ವೋಲ್ವೋ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳವಾರ ಹೆಬ್ಬಾಳ ಫೈಓವರ್ ಮೇಲೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಇಬ್ಬರು ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿರುವ ಬಸ್ ಬಳಿಕ ನಿಯಂತ್ರಣ ತಪ್ಪಿ ಮುಂದೆ ಸಾಗಿ ದಾರಿಯುದ್ದಕ್ಕೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಅಪಘಾತದ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಬಸ್ ನಾಲ್ಕು ಕಾರು, ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದಿರುವುದು ಕಂಡು ವೀಡಿಯೋದಲ್ಲಿ ಕಾಣಬಹುದಾಗಿದೆ.