ಪ್ರತಿನಿಧಿ ವರದಿ ಹನೂರು
ಶನಿವಾರ ಬೆಳಗ್ಗೆ ವ್ಯಕ್ತಿಯೊರ್ವ ನೇಣು ಬಿಗಿದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದೆ.
ತಾಲೂಕಿನ ಕೌದಳ್ಳಿ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಮರವೊಂದರಲ್ಲಿ ಅಪರಿಚಿತ ವ್ಯಕ್ತಿ ಅಂದಾಜು (50) ಮೃತದೇಹ ಪತ್ತೆಯಾಗಿದೆ. ಸದ್ಯಕ್ಕೆ ಮೃತ ವ್ಯಕ್ತಿಯ ವಿಳಾಸ, ಹೆಸರು ಸೇರಿದಂತೆ ವಾರಸ್ತುದಾರರ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರಾಮಾಪುರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.