ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದೆ. ನಟನನ್ನು ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ನಂತರ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಥುನ್ ಚಕ್ರವರ್ತಿ ಅವರ ಆಪ್ತ ಮೂಲಗಳು ನಟನಿಗೆ ಅಸ್ವಸ್ಥತೆ ಉಂಟಾಗಿದೆ. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮಾಹಿತಿ ಕೊಟ್ಟಿದ್ದಾರೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಿಥುನ್ ಚಕ್ರವರ್ತಿ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು. ನಟ ಮತ್ತು ರಾಜಕಾರಣಿ ಮಿಥುನ್ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದರು.