ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಸೂಸೈಡ್ ಮಾಡಿಕೊಂಡಿದ್ದಾರೆ. ತಮ್ಮ ಬಿಲ್ಡಿಂಗ್ ಮೇಲಿಂದ ಕೆಳಗೆ ಹಾರಿರುವ ಅನಿಲ್ ಅರೋರಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಪೊಲೀಸ್ ಮೂಲದ ಪ್ರಕಾರ ಮಲೈಕಾ ಅರೋರಾ ತಂದೆ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗಾಗ್ಲೇ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈವರೆಗೂ ಆತ್ಮಹತ್ಯೆಯ ಪತ್ರ ಸಿಕ್ಕಿಲ್ಲ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಮುಂಬೈನ ಬಾಂದ್ರಾ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಅನಿಲ್ ಅರೋರಾ ತಮ್ಮ 6 ಅಂತಸ್ತಿನ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಹಾಗೂ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಖಚಿತಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಲ್ ಅರೋರಾ ಅವರು ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್ ಡಿವೋರ್ಸ್ ಪಡೆದಿದ್ದರು. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಿಲ್ ಆರೋರಾ ಅವರು ಇದೀಗ ಸಾವಿಗೆ ಶರಣಾಗಿದ್ದಾರೆ.