ಮೈಸೂರು: ಇಂದು ವಿಶ್ವ ಛಾಯಾಗ್ರಾಹಣ ದಿನಾಚರಣೆ ಹಿನ್ನೆಲೆ ಮೈಸೂರಿನ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನವನ್ನು ಆಚರಿಸಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್ ಕ್ಯಾಮರಾ ಕ್ಲಿಕ್ಕಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದ್ದ ಮೈಸೂರು ಛಾಯಾಗ್ರಾಹಕರು ತೆಗೆದಿರುವ ಅಪರೂಪದ ಛಾಯಾಚಿತ್ರಗಳನ್ನು ಗಣ್ಯರು ವೀಕ್ಷಣೆ ಮಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ್ ಸುವರ್ಣ, ಪ್ರಗತಿ ಗೋಪಾಲಕೃಷ್ಣ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಸೇರಿದಂತೆ ಜಿಲ್ಲಾ ಪತ್ರಕರ್ತರ ಸಂಘದ ಇನ್ನಿತರ ಪದಾಧಿಕಾರಿಗಳು ಹಾಗು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.