ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ, ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಕೇಸ್ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತದೆ. ಪೊಲೀಸರು ಸುಮೊಟೋ ಕೇಸ್ ದಾಖಲಿಸಿಲ್ಲ. ಕಂಪ್ಲೆಂಟ್ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನ ಆಗಿದೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದರು.