ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಮೈತ್ರಿ ಪಕ್ಷಗಳ ಒಮ್ಮತದ ಅಭ್ಯರ್ಥಿ ಕಣಕ್ಕೆಇಳಿಯಲಿದ್ದಾರೆ ಎಂದು ಮಾಜಿ ಸಚಿವ ಸಾ ರಾ ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಅಭ್ಯರ್ಥಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಚನ್ನಪಟ್ಟಣ ಕ್ಷೇತ್ರವನ್ನು ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದರು ಆದರೆ ಅಲ್ಲಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಬೇಕೆಂಬ ಒತ್ತಾಯವಿದೆ. ಸದ್ಯ ನಿಖಿಲ್ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದು, ಅಭ್ಯರ್ಥಿ ಯಾರೆಂದು ಇನ್ನೂ ತೀರ್ಮಾನವಾಗಿಲ್ಲ.ಒಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ನ ಒಮ್ಮತದ ಅಭ್ಯರ್ಥಿ ಚನ್ನಪಟ್ಟಣದಿಂದ ಕಣಕ್ಕಿಳಿಯುತ್ತಾರೆ ಇದರಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಮಾಜಿ ಸಚಿವ ಸಾ ರಾ ಮಹೇಶ್ ಹೇಳಿದ್ದಾರೆ.