ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇಂದು ಪ್ರತಿಷ್ಠಿತ ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇಂದು ನಾಮಪತ್ರ ಸಲ್ಲಿಕೆಗೂ ಮುನ್ನ ಸಿಪಿ ಯೋಗೇಶ್ವರ್ ಚನ್ನಪಟ್ಟಣದ ಬಸವನಗುಡಿ ಸರ್ಕಲ್ ನಿಂದ ತಾಲೂಕು ಕಚೇರಿವರೆಗೆ ಬೃಹತ್ ರೋಡ್ ಶೋ ನಡೆಸಲಿದ್ದು, ನಂತರ ಮಧ್ಯಾಹ್ನ 1 ಗಂಟೆಗೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅಲ್ಲದೆ ಈ ಮೂಲಕ ದೋಸ್ತಿ ನಾಯಕರ ವಿರುದ್ಧ ಬೃಹತ್ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ರೋಡ್ ಶೋನಲ್ಲಿ ಸುಮಾರು 20ಸಾವಿರ ಕಾರ್ಯಕರ್ತರನ್ನ ಸೇರಿಸಲು ತಯಾರಿ ನಡೆಸಲಾಗಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಜಮೀರ್ ಅಹಮ್ಮದ್, ಕೃಷ್ಣ ಭೈರೇಗೌಡ, ಶಾಸಕರಾದ ಹೆಚ್.ಸಿ.ಬಾಲಕೃಷ್ಣ, ಇಕ್ಬಾಲ್ ಹುಸೇನ್, ಕದಲೂರ್ ಉದಯ್, ಕುಣಿಗಲ್ ರಂಗನಾಥ್, ಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.