ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಅಂತಿಮ ತೀರ್ಮಾನವೇ ಹೊರತು ಯಾರೋ ಹೇಳಿದ ಮಾತ್ರಕ್ಕೆ ಬದಲಾವಣೆ ಸಾಧ್ಯವಿಲ್ಲ ಎಂದು ಶಾಸಕ ಕೆ.ಎಂ. ಉದಯ್ ಸಚಿವ ಪರಮೇಶ್ವರ್ ಪರ ಬೆಂಬಲ ಸೂಚಿಸಿದ್ದ ಸಹಕಾರ ಸಚಿವ ಕೆ.ಎಂ.ರಾಜಣ್ಣಗೆ ಟಾಂಗ್ ನೀಡಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಮಾನದಂಡವಿರುತ್ತದೆ. ಅದಕ್ಕೆ ಅನುಗುಣವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
ಯಾರೋ ಹೇಳಿಕೆ ನೀಡಿದರೆಂಬ ಕಾರಣಕ್ಕೆ ಮುಖ್ಯಮಂತ್ರಿಯಾಗುವುದಿಲ್ಲ. ದಲಿತರು ಮುಖ್ಯಮಂತ್ರಿಯಾಗಲು ಈ ಹಿಂದೆ ಅವಕಾಶವಿತ್ತು. ಮುಖ್ಯಮಂತ್ರಿ ಮಾಡುವುದು ಬಿಡುವುದು ಹೈಕಮಾಂಡ್ ತೀರ್ಮಾನ ಎಂದು ಹೇಳುವ ಮೂಲಕ ದಲಿತ ಸಿಎಂ ವಿಚಾರವನ್ನು ತಳ್ಳಿ ಹಾಕಿದರು.