ಬೆಂಗಳೂರು: ಗಾಂಧಿ ಜಯಂತಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿಯ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮದ ಹಿನ್ನೆಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ʼಗಾಂಧಿ ನಡಿಗೆʼ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಮಾರ್ ಕಾಲ್ನಡಿಗೆಯಲ್ಲಿಯೇ ವಿಧನಸೌಧಕ್ಕೆ ತೆರಳಿದ್ದಾರೆ.
ಬೆಂಗಳೂರಿನ ಗಾಂಧೀ ಭವನದಿಂದ ಪ್ರಾರಂಭವಾದ ಗಾಂಧಿ ನಡಿಗೆ ಕಾರ್ಯಕ್ರಮ ಅಂಗವಾಗಿ ವಿಧಾನಸೌಧದವರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವರಾದ ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ ಕಾಲ್ನಡಿಗೆಯಲ್ಲಿ ಸಾಗಿದರು. ಮುಖ್ಯಮಂತ್ರಿಗಳಿಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ರಿಜ್ವಾನ್ ಸೇರಿ ಹಲವರು ಸಾಥ್ ನೀಡಿದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ರಾಷ್ಟಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನ’ದ ಅಂಗವಾಗಿ ವಿಧಾನಸೌಧದ ‘ಗಾಂಧೀಜಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಹಾಗೂ ‘ಭಾರತದ ಮಾಜಿ ಪ್ರಧಾನಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತಿç ಅವರ 120ನೇ ಜನ್ಮದಿನ’ದ ಅಂಗವಾಗಿ ಅವರ ‘ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ’ ಮಾಡಿ ಗೌರವ ಸಲ್ಲಿಸಿದರು.