ಮೈಸೂರು, ಅಕ್ಟೋಬರ್ 25: ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಬಿಗ್ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ಗೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಮನೆಯಿಂದಲೇ ಬಂಧನವಾಗಿದ್ದ ಸಂತೋಷ್ ಸದ್ಯ ಜೈಲಿನಲ್ಲಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹುಲಿ ಉಗುರು ವಿಚಾರವಾಗಿ ಸದ್ಯ ಬೇರೆ ಬೇರೆ ಅವರ ಹೆಸರುಗಳು ಸಹ ಕೇಳಿಬರುತ್ತಿವೆ. ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ (Jaggesh) ಅವರು ಸಹ ಹುಲಿ ಉಗುರು ಹೊಂದಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಜಗ್ಗೇಶ್ ಯಾಕೆ ಹುಲಿ ಉಗುರು ಧರಿಸಿದ್ದರು ಅನ್ನೋದು ಗೊತ್ತಿಲ್ಲ. ಪೊಲೀಸ್ ಇಲಾಖೆ ಜೊತೆ ಮಾಹಿತಿ ಪಡೆದು ಮಾತಾಡುತ್ತೇನೆ ಎಂದು ಹೇಳಿದ್ದಾರೆ.