ಮುಡಾ ಹಗರಣ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಾಸಿಕ್ಯೂಷನ್ ಗೆ ಸಂಪುಟದಲ್ಲಿ ಎಲ್ಲಾ ಉತ್ತರ ಕೊಟ್ಟಿದ್ದೇವೆ ಎಂದಿದ್ದಾರೆ.
ಮುಡಾ ಹಗರಣದಲ್ಲಿ ಸಿಎಮ್ ಭಾಗಿ ವಿಚಾರ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ವಿಚಾರದ ಕುರಿತು ಇಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಲು ಸಚಿವ ಸಂಫುಟ ಸಭೆಯಲ್ಲಿ ನಿರ್ಧಾರವನ್ನು ಮಾಡಿಲಾಗಿದೆ. ಟಿಜೆ ಅಬ್ರಾಹಂ ದೂರನ್ನ ತಿರಸ್ಕರಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಹಾಗೂ ಪ್ರಾಸಿಕ್ಯೂಷನ್ ಗೆ ಸಂಪುಟದಲ್ಲಿ ಉತ್ತರ ಕೊಟ್ಟಿದ್ದೇವೆ ಎಂದಿದ್ದಾರೆ.
ಇದೇ ವೇಳೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈಗ ಕೊಡಗು ಜಿಲ್ಲೆಗೆ ಹೋಗ್ತಿದ್ದೇನೆ. ನಾಳೆ ಮೈಸೂರು ಜಿಲ್ಲೆಯಲ್ಲಿ ಪರಿಶೀಲನೆ ಮಾಡುತ್ತೇವೆ ಬಳಿಕ ರಾಮನಗರದಲ್ಲಿ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದರು.