ಕರ್ನಾಟಕ ರಾಜ್ಯದ ಹೆಮ್ಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆ ಮೈಸೂರಿನಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. ಕೆಪಿಸಿಸಿ ಮಹಿಳಾ ಘಟಕದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ರಕ್ತದಾನ ಶಿಬಿರಕ್ಕೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪ ಅಮರನಾಥ್ ಚಾಲನೆ ನೀಡಿದ್ರು. ರಕ್ತದಾನ ಶಿಬಿರದಲ್ಲಿ ಸ್ವತಃ ರಕ್ತದಾನ ಮಾಡಿದ ಪುಷ್ಪ ಅಮರನಾಥ್ ಇತರರಿಗೆ ಮಾದರಿಯಾದ್ರು. ಅನೇಕ ಮಹಿಳಾ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ್ರು. ಇದೇ ವೇಳೆ ಸ್ಥಳೀಯ ಮುಖಂಡರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಬಿಜೆಪಿ & ಜೆಡಿಎಸ್ ಮುಖಂಡರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣ ಮುಂದಿಟ್ಟುಕೊಂಡು ಮೈಸೂರು ಚಲೋ ಪಾದಯಾತ್ರೆ ನಡೆಸಿದ ವಿಪಕ್ಷಗಳ ವಿರುದ್ದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಕೆಂಡಾಮಂಡಲವಾದರು. ಅವರು ನಡೆಸಿದ್ದು ಪಾದಯಾತ್ರೆಯಲ್ಲ, ಅದು ಪಾಪದ ಯಾತ್ರೆ. ಪಾದಯಾತ್ರೆ ಮೂಲಕ ಕುಮಾರಸ್ವಾಮಿ, ವಿಜಯೇಂದ್ರ ಮತ್ತು ನಿಖಿಲ್ ಶೋ ಮಾಡಿದರು, ಆದರೆ ಅವರ ಶೋ ಪ್ಲಾಫ್ ಆಯಿತು. ಇವರು ಮೈಸೂರು ಚಲೋ ಮಾಡುವ ಬದಲು ದೆಹಲಿ ಚಲೋ ಮಾಡಬೇಕಿತ್ತು, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರಲು ದೆಹಲಿ ಚಲೋ ಮಾಡಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮೈಸೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದರು.