ಕಮ್ಯುನಿಸ್ಟ್ ನಾಯಕ, ಹಿರಿಯ ಎಡಪಂಥೀಯ ವಾದಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಇಂದು ನಿಧನ ರಾಗಿದ್ದಾರೆ. ನವೆಂಬರ್ 2000 ದಿಂದ ಮೇ 2011ರ ತನಕ ಬುದ್ಧದೇವ್ ಭಟ್ಟಾಚಾರ್ಯ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. ಹಲವು ಗಣ್ಯರು ಮಾಜಿ ಮುಖ್ಯಮಂತ್ರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
80 ವರ್ಷದ ಬುದ್ಧದೇವ್ ಭಟ್ಟಾಚಾರ್ಯ ದಕ್ಷಿಣ ಕೋಲ್ಕತ್ತಾದಲ್ಲಿರುವ ನಿವಾಸದಲ್ಲಿ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದ ಅವರು ಚಿಕಿತ್ಸೆ ಪಡೆದು ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.ಕಳೆದ ವರ್ಷ ಆಸ್ಪತ್ರೆಯಲ್ಲಿ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಸುದೀರ್ಘ ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು ಇದೀಗ ಅವರು ವಿಧಿವಶರಾಗಿದ್ದು, ಪತ್ನಿ ಮೀರಾ ಮತ್ತು ಮಗ ಸುಚೇತನ್ ಅವರನ್ನು ಅಗಲಿದ್ದಾರೆ.