ಪ್ರತಿನಿಧಿ ವರದಿ ಯಳಂದೂರು
ಹೊನ್ನೂರು ಗ್ರಾಮದ ಸರ್ಕಾರಿ ಎರಡನೇ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿ ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಶಾಲೆಯ ಪರವಾಗಿ ಅಭಿನಂದನೆ ಸಲ್ಲಿಸಿ ಸುಭ ಹಾರೈಸಿದರು.
ತಾಲೂಕಿನ ಹೊನ್ನೂರು ಗ್ರಾಮದ 2ನೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಶನಿವಾರ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕೊಕ್ಕೋ, ಓಟ, ರಿಲೇ ಸೇರಿದಂತೆ ಅನೇಕ ಕ್ರೀಡಾ ಚಟುವಟಿಕೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ನಂಜುಂಡಸ್ವಾಮಿ ಅವರು ಕ್ರೀಡಾಕೂಟವಿಜೇತ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿ ಶಾಲೆಗೆ ಕೀರ್ತಿ ತಂದಿದ್ದು, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲೂ ಕೂಡ ಗೆಲುವು ಸಾಧಿಸಿ ತಾಲೂಕಿಗೆ ಕೀರ್ತಿ ತರಬೇಕೆಂದು ಶುಭ ಹಾರೈಸಿದರು.
ಎಸ್ಡಿಎಂಸಿ ಅಧ್ಯಕ್ಷ, ಶಿಕ್ಷಕರಾದ ವರದರಾಜ ಸೇರಿದಂತೆ ಸಲಹೆ ಶಿಕ್ಷಕರು ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.