ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧತೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈಗಾಗಲೇ ಎಲ್ಲ ಲೋಕಸಭಾ ಕ್ಷೇತ್ರಗಳಿಗೂ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಶೇ.75ರಷ್ಟು ಕ್ಷೇತ್ರಗಳಲ್ಲಿ ವೀಕ್ಷಕರು ಕಾರ್ಯಕರ್ತರನ್ನು ಭೇಟಿ ಆಗಿ ಚರ್ಚೆ ನಡೆಸಿ ಅಭ್ಯರ್ಥಿಗಳ ವರದಿಯನ್ನೂ ಸಿದ್ಧಪಡಿಸಿಟ್ಟುಕೊಂಡಿದ್ದಾರೆ. ಆದರೆ ವರದಿ ಇನ್ನೂ ಕೆಪಿಸಿಸಿಗೆ ತಲುಪಿಲ್ಲವಷ್ಟೆ. ವರಿಷ್ಠರು ಕೆಲವು ಸಲಹೆಗಳನ್ನು ನೀಡಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಹೇಳಿದರು.