ಪ್ರತಿನಿಧಿ ವರದಿ ಚಾಮರಾಜನಗರ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಬಿಸಲವಾಡಿ, ಹೊನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತಯಾಚನೆ ಮಾಡಿದರು.
ಮೊದಲಿಗೆ ಮಾಜಿ ಶಾಸಕ ದಿ.ಬಿ.ಎಸ್.ಪುಟ್ಟಸ್ವಾಮಿ ಅವರ ಸಮಾಧಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪುಷ್ಪಾರ್ಚನೆ ಮಾಡಿ, ಮತಯಾಚನೆಗೆ ಚಾಲನೆ ನೀಡಿದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಬಿಸಲವಾಡಿ, ಹೊನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಪ್ರತಿಮನೆಗೂ ಭೇಟಿನೀಡಿ, ಮತಯಾಚಿಸಿದರು. ಬಳಿಕ ಅವರು ಮಾತನಾಡಿ, ಬಿಜೆಪಿ ಸರ್ಕಾರದ ಸುಳ್ಳು ಭರವಸೆಗಳಿಗೆ ಮತದಾರರು ಮರುಳಾಗಬಾರದು. ಜನರಿಗೆ ಅನುಕೂಲವಾಗಿರುವ 5 ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಗೆ ಮತ ನೀಡುವ ಮೂಲಕ ಸಿದ್ದರಾಮಯ್ಯ ಅವರ ಕೈಬಲಪಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರದಾನ ಕಾರ್ಯದರ್ಶಿ ಚಿಕ್ಕಮಹದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ಗ್ರಾಪಂ ಅಧ್ಯಕ್ಷೆ ರಮ್ಯನಾಗರಾಜು, ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯ ಎ.ಎಸ್.ಪ್ರದೀಪ್, ಮುಖಂಡರಾದ ಮಹದೇವಪ್ಪ, ಬಿಸಲವಾಡಿರವಿ, ಪಿಎಸಿಸಿ ಅಧ್ಯಕ್ಷ ಮಹದೇವಯ್ಯ, ಉಪಾಧ್ಯಕ್ಷ ಸಿದ್ದಶೆಟ್ಟಿ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಸದಸ್ಯ ಪುರುಷೋತ್ತಮ್ ಇದ್ದರು.
8ಸಿಎಚ್ಎನ್.1:ಚಾಮರಾಜನಗರ ತಾಲೂಕಿನ ಬಿಸಲವಾಡಿ, ಹೊನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತಯಾಚನೆ ಮಾಡಿದರು.