ಬೆಂಗಳೂರು : ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.