ಬೆಂಗಳೂರು : ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ ವೇಳೆ 40 ಪರ್ಸೆಂಟ್ ಕಮಿಷನ್ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಸಮನ್ಸ್ ಜಾರಿ ಮಾಡಿದೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಏಪ್ರಿಲ್ 29ಕ್ಕೆ ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೆ, ರಾಹುಲ್ ಗಾಂಧಿಗೆ ಜೂನ್ 1ಕ್ಕೆ ಹಾಜರಾಗಲು ಸೂಚಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚನೆ ನೀಡಿದರೆ, ಸಿಎಂಗೆ ಸಮನ್ಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರಿಗೆ ನಿರ್ದೇಶನ ನೀಡಿದೆ.