ಮಂಡ್ಯ: ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ – 2 ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಯಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ – 2 ಅನ್ನು ಸುಗಮವಾಗಿ ನಡೆಯಲು ಮಂಡ್ಯ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ದಿನಗಳಂದು 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಸೈಬರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು/ಸಿಬ್ಬಂದಿ ಹೊರತುಪಡಿಸಿ ಇತರರು ಯಾರೂ ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳು: ಮಂಡ್ಯ ಮಾಂಡವ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಂಡ್ಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲು ಕಟ್ಟಡ , ಮದ್ದೂರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಳವಳ್ಳಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆಆರ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀರಂಗಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಾಂಡವಪುರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.