ಕಸಾಪ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಅಭಿಪ್ರಾಯ
ಪ್ರತಿನಿಧಿ ವರದಿ ಚಾಮರಾಜನಗರ
ಪತ್ರಿಕೆಗಳು ಭಾಷೆ, ಶಬ್ದ ಭಂಡಾರ, ಪದಗಳ ಸಂಪತ್ತು, ಸಂಸ್ಕೃತಿ, ಪರಂಪರೆ, ಜೀವನ ಮೌಲ್ಯಗಳು, ಸನ್ಮಾರ್ಗದ ಹಾದಿಯನ್ನು ತಿಳಿಸಿಕೊಡುವ ಜ್ಞಾನದ ಭಂಡಾರವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ತಿಳಿಸಿದರು.
ಪತ್ರಿಕಾ ದಿನಾಚರಣೆ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕೆಗಳ ಮಹತ್ವ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ದುಡಿಯುತ್ತಿರುವ ಸರ್ವರಿಗೂ ಕೃತಜ್ಞತೆ ಸಲ್ಲಿಸುವ ಸಮಾರಂಭದಲ್ಲಿ ಮಾತನಾಡಿದರು.
ಭಾಷೆ ನಿರಂತರವಾಗಿ ಬೆಳೆಯಲು ಪತ್ರಿಕೆಗಳು ಹಾಗೂ ಮಾಧ್ಯಮಗಳು ಪರಿಣಾಮಕಾರಿಯಾಗಿದೆ. ಪತ್ರಿಕೆಗಳು ಸಾವಿರಾರು ಶಬ್ದಗಳ ವಿಶ್ಲೇಷಣೆಯ ಮೂಲಕ ಮಹಾನ್ ರಹಸ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಪತ್ರಿಕೆಗಳನ್ನು ಪ್ರೀತಿಸಿ ಜ್ಞಾನವನ್ನು ಅರಳಿಸಿಕೊಳ್ಳಿ ಎಂದು ತಿಳಿಸಿದರು.
ಕನ್ನಡ ಪರ ಹೋರಾಟಗಾರ ಶ್ರೀನಿವಾಸಗೌಡ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ದಿನಾಚರಣೆಯನ್ನು ಆಚರಿಸುವ ಮೂಲಕ ಪತ್ರಿಕಾ ಕ್ಷೇತ್ರದ ಸರ್ವರನ್ನು ಗೌರವಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಕನ್ನಡ ಪತ್ರಿಕೆಯ ಅಭಿವೃದ್ಧಿಗಾಗಿ ದುಡಿಯುತ್ತಿರುವ ಸರ್ವರಿಗೂ ಅಭಿನಂದನೆಗಳನ್ನು ಸಮಾಜ ಸದಾಕಾಲ ಅರ್ಪಿಸುತ್ತಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ಬಿಕೆ ಆರಾಧ್ಯ, ರವಿಚಂದ್ರ ಪ್ರಸಾದ್, ಸುರೇಶ್ ಗೌಡ, ಪರಮೇಶ್ವರಪ್ಪ, ಬೊಮ್ಮಾಯಿ ಪಣ್ಯದಹುಂಡಿ ರಾಜು, ಬಂಡಿಗೆರೆ ಸಿದ್ದೇಶ್, ಶಿವಲಿಂಗಮೂರ್ತಿ, ನಂಜುಂಡಸ್ವಾಮಿ ಸೇರಿದಂತೆ ಇತರರು ಇದ್ದರು.
2ಸಿಎಚ್ಎನ್.3:
ಚಿತ್ರವಿದೆ