ತುಮಕೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನಂತರವೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ದಳಪತಿ ಈ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ದೇವೇಗೌಡ, ಚುನಾವಣೆ ಮುಗಿದ ಮೇಲೇಯೂ ಬಿಜೆಪಿ-ಜೆಡಿಎಸ್ ಸಂಬಂಧ ಮುಂದುವರೆಯುತ್ತದೆ. ಈ ಸಂಬಂಧ ಕಾಪಾಡುಕೊಂಡು ಹೋಗುತ್ತೇವೆ. ನಮ್ಮ ಬಾಂಧವ್ಯ ತಾತ್ಕಾಲಿಕವಲ್ಲ. ಈ ಬಾಂಧವ್ಯವನ್ನ ಮುಂದುವರೆಸಿಕೊಂಡು ಹೋಗುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.