ವೆಂಕಟರಮಣಸ್ವಾಮಿಗೆ ವಿಶೇಷ ಅಲಂಕಾರ
ಪ್ರತಿನಿಧಿ ವರದಿ ಕೋಲಾರ
ಜಿಲ್ಲಾದ್ಯಂತ ಕೊನೆಯ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದಿದ್ದು, ನಗರದ ಪೇಟೆಯ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ನಗರದ ದೊಡ್ಡಪೇಟೆಯ ವೆಂಕಟರಮಣಸ್ವಾಮಿ ದೇವಾಲಯವನ್ನು ವಿಶಿಷ್ಟ ರೀತಿಯ ಹೂಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದು, ಇಡೀ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತಸಾಗರ ಸಾಲುಗಟ್ಟಿ ನಿಂತು ಸ್ವಾಮಿಯ ದರ್ಶನ ಪಡೆಯಲು ನೆರವಾದರು ಪ್ರತಿವರ್ಷವೂ ಕೊನೆ ಶ್ರಾವಣ ಶನಿವಾರ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಕಾರ್ಯಗಳು ನಡೆಯುತ್ತಿವೆ.
ಹೆಚ್ಚಿನ ಜನದಟ್ಟಣೆಯಿಂದಾಗಿ ದೇವಾಲಯದ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ, ಭಕ್ತರ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಪೊಲೀಸ್ ಇಲಾಖೆ ಬಂದೋಬಸ್ತ್ ವ್ಯವಸ್ಥೆ ಮಾಡಿತ್ತು. ಬೆಳಗ್ಗೆ 6 ಗಂಟೆಯಿಂದಲೇ ವಿವಿಧ ಭಕ್ತ ಮಂಡಳಿಗಳಿಂದ ವಿಷ್ಣು ಸಹಸ್ರನಾಮ, ಅನ್ನಮಯ್ಯ ಕೀರ್ತನೆಗಳ ಗಾಯನ ಕಾರ್ಯಕ್ರಮ.