ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಆಹ್ವಾನ ನೀಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸಹ-ಪ್ರಾಂತೀಯ ಕಾರ್ಯದರ್ಶಿ ಧನಂಜಯ್ ಸಿಂಗ್ ಅವರು ವಿಶ್ವಕಪ್ ವಿಜೇತ ನಾಯಕನಿಗೆ ಆಹ್ವಾನವನ್ನು ನೀಡಿದರು. ಬಿಜೆಪಿಯ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕರ್ಮವೀರ್ ಸಿಂಗ್ ಕೂಡ ಈ ವೇಳೆ ಹಾಜರಿದ್ದರು. ಆಮಂತ್ರಣ ಸ್ವೀಕರಿಸಿದ ಧೋನಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಯೋಧ್ಯಾ ನಗರದಲ್ಲಿ ಜನವರಿ 22 ರಂದು ನಡೆಯಲಿರುವ ಬಹು ನಿರೀಕ್ಷಿತ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ಉಪಸ್ಥಿತರಿರಲಿದ್ದಾರೆ. ಅಲ್ಲದೆ ಈಗಾಗಲೇ ಉದ್ಯಮಿ ಮುಖೇಶ್ ಅಂಬಾನಿ, ರತನ್ ಟಾಟಾ, ಲೆಜೆಂಡ್ ಬಾಲಿವುಡ್ ನಟ ಅಮಿತಾಬ್ ಬಚ್ಚನ್, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ಇನ್ನೂ ಕೆಲವು ಉನ್ನತ ವ್ಯಕ್ತಿಗಳಿಗೆ ಆಹ್ವಾನಗಳನ್ನು ನೀಡಲಾಗಿದೆ. ಹೀಗಾಗಿ ಅವರುಗಳು ಕೂಡ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಹೆಚ್ಚಿದೆ.