ಪ್ರತಿನಿಧಿ ವರದಿ ಚಾಮರಾಜನಗರ
ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ 22-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಏ. 26 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಗುರುತಿಗಾಗಿ ಮತದಾರರ ಗುರುತಿನ ಚೀಟಿಯನ್ನು ನೀಡಿ ಮತದಾನ ಮಾಡಬಹುದಾಗಿದೆ.
ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ಹಾಜರು ಪಡಿಸಲು ಸಾಧ್ಯವಾಗದೇ ಇರುವ ಮತದಾರರು ಮತದಾನ ಮಾಡಲು ಈ ಕೆಳಕಂಡ ದಾಖಲೆಗಳ ಪೈಕಿ ಯಾವುದಾದರು ಒಂದು ದಾಖಲಾತಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.
ಆಧಾರ್ ಕಾರ್ಡ್, ಮನರೇಗಾ ಜಾಬ್ ಕಾರ್ಡ್, ಬ್ಯಾಂಕ್, ಅಂಚೆ ಕಚೇರಿಯಲ್ಲಿ ತೆರೆಯಲಾದ ಖಾತೆಯ ಭಾವಚಿತ್ರವುಳ್ಳ ಪಾಸ್ಪುಸ್ತಕದ ಪ್ರತಿ, ಕಾರ್ಮಿಕ ಇಲಾಖೆಯ ಯೋಜನೆಯಡಿ ನೀಡಿದ ಭಾವಚಿತ್ರವುಳ್ಳ ಆರೋಗ್ಯ ವಿಮೆಯ ಸ್ಮಾರ್ಟ್ ಕಾರ್ಡ್, ಭಾವಚಿತ್ರವುಳ್ಳ ಚಾಲನಪರವಾನಗಿ, ಭಾವಚಿತ್ರವುಳ್ಳ ಪಾನ್ ಕಾರ್ಡ್, ಎನ್.ಪಿ.ಆರ್. ಅಡಿಯಲ್ಲಿ ಆರ್.ಜಿ.ಐ ನೀಡಿದ ಭಾವಚಿತ್ರವುಳ್ಳ ಸ್ಮಾರ್ಟ್ ಕಾರ್ಡ್, ಭಾವಚಿತ್ರವುಳ್ಳ ಇಂಡಿಯನ್ ಪಾಸ್ಪೋರ್ಟ್, ಭಾವಚಿತ್ರವುಳ್ಳ ಪಿಂಚಣಿ ಆದೇಶ ಪ್ರತಿ, ಕೇಂದ್ರ, ರಾಜ್ಯ, ಸಾರ್ವಜನಿಕ ಸೇವಾ ವಲಯಗಳು, ಸಾರ್ವಜನಿಕ ಸಂಸ್ಥೆಗಳ ವತಿಯಿಂದ ನೀಡಿರುವ ಭಾವಚಿತ್ರವುಳ್ಳ ಸೇವಾ ಗುರುತಿನ (UDID) ಚೀಟಿ, ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರಿಗೆ ನೀಡಲಾಗಿರುವ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ, ಭಾರತ ಸರ್ಕಾರ ರವರ ವತಿಯಿಂದ ನೀಡಿರುವ ಭಾವಚಿತ್ರವುಳ್ಳ ವಿಶೇಷಚೇತನ ಗುರುತಿನ ಚೀಟಿ(U) ಯಂತಹ ಯಾವುದಾದರು ಒಂದು ದಾಖಲಾತಿಯನ್ನು ಹಾಜರು ಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
25ಸಿಎಚ್ಎನ್.5:
( ಜಿಲ್ಲಾಧಿಕಾರಿ ಅವರ ಚಿತ್ರ ಬಳಸಿಕೊಳ್ಳಿ ಸರ್)