ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ ಜಯಲಕ್ಷ್ಮೀ ಸಲಹೆ
। ವಿಶ್ವ ತಂಬಾಕು ರಹಿತ ದಿನಾಚರಣೆ
ಪ್ರತಿನಿಧಿ ವರದಿ ಮಡಿಕೇರಿ
ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳದೆ ಉತ್ತಮ ಜೀವನ ನಿರ್ಮಾಣ ಮಾಡಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಬಿ ಜಯಲಕ್ಷ್ಮೀ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಭಾಂಗಣದಲ್ಲಿ ಆಯೋಜಿಸಿದ್ದ “ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ. ವಿಶಾಲ್ ಮಾತನಾಡಿ, ತಂಬಾಕುವಿನ ಸೇವನೆಗೆ ಹೆಚ್ಚಾಗಿ ಯುವ ಜನತೆ ಮಾರುಹೋಗುತ್ತಿದ್ದಾರೆ. ಇದರಿಂದ ಅನೇಕ ಅಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ತಂಬಾಕನ್ನು ಮಕ್ಕಳಿಂದ ದೂರವಿರಿಸಿ ಮಕ್ಕಳನ್ನು ರಕ್ಷಿಸಿ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎಲ್.ಶ್ರೀನಿವಾಸ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ರೇವಣ್ಣ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಟಿ.ಎನ್ ಪಾಲಾಕ್ಷ, ಹಿರಿಯ ಆರೋಗ್ಯನಿರೀಕ್ಷಣಾಧಿಕಾರಿ ಶ್ರೀನಾಥ್ ಇದ್ದರು.
ಫೋಟೋ 2 ಎಂಡಿಕೆ 05 ; ತಂಬಾಕು ದಿನಾಚರಣೆಯಲ್ಲಿ ಪ್ರತಿಜ್ಞಾ ವಿಧಿ ಬೋದಿಸಲಾಯಿತು.