ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಅಡಿಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಹಿನ್ನಲೆಯನ್ನು ತನಿಖೆ ನಡೆಸಿ ಸತ್ಯಾಸತ್ಯತೆ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ವಿರುದ್ದ ಮಹಿಳೆ ನೀಡಿದ ದೂರಿನ ಹಿನ್ನೆಲೆಯನ್ನು ಪರಿಶೀಲನೆ ಮಾಡಿ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಅದರ ಬಗ್ಗೆ ತನಿಖೆ ನಡೆಸಲಿದ್ದಾರೆ. ಅವರು ಕೊಟ್ಟಿರುವ ದೂರಿನ ಬಗ್ಗೆ ತನಿಖೆ ಪೂರ್ಣಗೊಳ್ಳದೆ ನಾನು ಏನೂ ಹೇಳಲು ಆಗುವುದಿಲ್ಲ ಎಂದರು.