ಮೈಸೂರು: ಭಾರತ ಹಿಂದೂ ರಾಷ್ಟ್ರವಾದರೆ ದೇಶಕ್ಕೆ ಅಪಾಯಕಾರಿ ಎಂಬ ಯತೀಂದ್ರ ಹೇಳಿಕೆ ವಿಚಾರ ತಮ್ಮ ಹೇಳಿಕೆಯನ್ನು ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತೆ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ತತ್ವಗಳನ್ನು ಒಪ್ಪುವವರು ಯಾರು ನನ್ನ ಹೇಳಿಕೆಯನ್ನು ತಪ್ಪು ಎಂದು ಹೇಳುವುದಿಲ್ಲ.ಅಂಬೇಡ್ಕರ್ ಅವರು ಹೇಳಿರುವುದನ್ನೇ ನಾನು ಪುನರ್ ಉಚ್ಚರಿಸಿದ್ದೇನೆ ಅಷ್ಟೆ.ಈ ದೇಶ ಜ್ಯಾತ್ಯತೀತವಾಗಿರಬೇಕು. ಯಾವುದೇ ಒಂದು ಧರ್ಮದ ವಿಚಾರವಾಗಿ ದೇಶ ಇರಬಾರದು. ಅದು ಯಾವತ್ತಿದ್ದರೂ ಅಪಾಯಕಾರಿ. ಧರ್ಮದ ಹೆಸರಿನಲ್ಲಿರುವ ಪಾಕಿಸ್ತಾನ ಮತ್ತು ಕೆಲವು ದೇಶಗಳ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಕಾರಣ ನಾನು ಹಿಂದೂ ರಾಷ್ಟ್ರವಾಗುವುದು ಅಪಾಯಕಾರಿ ಎಂದು ಹೇಳಿದ್ದೇನೆ. ನನ್ನ ಮಾತಿಗೆ ಈಗಲೂ ಬದ್ಧ.ನಾನು ಹೇಳಿರುವುದರಲ್ಲಿ ಯಾವುದು ತಪ್ಪು ಇಲ್ಲ ಎಂದು ಸಮರ್ಥಿಸಿಕೊಂಡರು.