ಬೆಂಗಳೂರು, (ಸೆಪ್ಟೆಂಬರ್ 27): ಬೆಂಗಳೂರಿನಲ್ಲಿ (Bengaluru) ಇಂದು(ಬುಧವಾರ) ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ(IT Raid). 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ (IT Officers) ತಂಡ ನಗರದ ಹುಳಿಮಾವು, ಬಾಗ್ ಮನೆ ಟೆಕ್ ಪಾರ್ಕ್ ಸೇರಿದಂತೆ ಐದು ಕಡೆ ದಾಳಿ ಮಾಡಿದೆ. ತೆರಿಗೆ ವಂಚನೆ ಆರೋಪದ ಮೇಲೆ ಹುಳಿಮಾವು ಸಮೀಪದ ಆಪಸ್ ಅಪಾರ್ಟ್ಮೆಂಟ್ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.