ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಡಾ.ಕೆ.ಸುಧಾಕರ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದರಿಂದ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಲಿಂಗಧೀರ ಗೊಲ್ಲಹಳ್ಳಿ ಜೆಡಿಎಸ್ ಮುಖಂಡ ರಘು ತಿಳಿಸಿದರು. ದೇವನಹಳ್ಳಿ ತಾಲೂಕು ಜೆಡಿಎಸ್ – ಬಿಜೆಪಿ ಮೈತ್ರಿ ಧರ್ಮವನ್ನು ಪ್ರತಿಯೊಬ್ಬರು ಪಾಲಿಸಬೇಕು. ಮಾಜಿ ಪ್ರಧಾನಿ ದೇವೇಗೌಡರು ಈಗಾಗಲೇ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎಂದು ಹೇಳಿದ್ದಾರೆ. ಅದರಂತೆ ನಾವೆಲ್ಲರೂ ಒಗ್ಗೂಡಿ ಈ ಭಾಗದಲ್ಲಿ ಲೋಕಸಭಾ ಸದಸ್ಯರನ್ನು ಗೆಲ್ಲಿಸಿಕೊಳ್ಳಬೇಕು. ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದು ಹೇಳಿದರು.