ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯ
ಸ್ವಚ್ಛತಾಹೀ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ
ಪ್ರತಿನಿಧಿ ವರದಿ ಮಡಿಕೇರಿ
ಪರಿಸರದ ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಜಿಪಂ ಆವರಣದಲ್ಲಿ ಗಿಡ ನೆಡುವ ಮೂಲಕ ಸ್ಚಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಘೋಷ ವಾಕ್ಯದೊಂದಿಗೆ ಈ ಬಾರಿಯ ಸ್ವಚ್ಛತಾಹೀ ಸೇವಾ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ತಿಳಿಸಿದರು.
ಕೊಡಗು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಗೆ ಅನುಕೂಲ ಮಾಡಿಕೊಡುತ್ತದೆ ಎಂದರು.
ಎಲ್ಲೆಂದರಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಮುದಾಯದ ಭಾಗವಹಿಸುವಿಕೆಯೊಂದಿಗೆ ಈ ಸ್ಥಳವನ್ನು ಸ್ವಚ್ಛ ಗೊಳಿಸಲಾಗುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಜತೆಗೆ ಈ ರೀತಿಯಾಗಿ ಅಕ್ರಮವಾಗಿ ತ್ಯಾಜ್ಯ ಸುರಿಯುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಮತ್ತು ಜಿಪಂ ಉಪ ಕಾರ್ಯದರ್ಶಿ ಜಿ.ಧನರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ತಾಯಿಯ ಹೆಸರಲ್ಲಿ ಒಂದು ವೃಕ್ಷ (ಏಕ್ ಪೇಡ್ ಮಾ ಕೇ ನಾಮ್) ಅಭಿಯಾನದ ಭಾಗವಾಗಿ ಸಸಿ ನೆಟ್ಟು ನೀರೆರೆಯಲಾಯಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ್ ನಾಯಕ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸ್ವಚ್ಛ ಭಾರತ್ ಮಿಷನ್ ಯೋಜನೆಯ ಜಿಲ್ಲಾ ಸಮಾಲೋಚಕ ಹರ್ಷಿತ, ಪೆಮ್ಮಯ್ಯ, ಸೂರಜ್, ವಾಸುದೇವ್ ಇದ್ದರು.
ಫೋಟೋ 19 ಎಂಡಿಕೆ 02 ; ಸ್ಚಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.