ಪ್ರತಿನಿಧಿ ವರದಿ ಮಳವಳ್ಳಿ
ತಾಲೂಕಿನ ಪೂರಿಗಾಲಿ ಗ್ರಾಮದಲ್ಲಿ ಪತ್ನಿಯ ಅನೈತಿಕ ಸಂಬಂಧದ ವಿಷಯ ತಿಳಿದು ಮನನೊಂದು ವ್ಯಕ್ತಿಯೊಬ್ಬ ಭಾನುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಕುಮಾರ(28) ಮೃತರು. ಇವರ ಪತ್ನಿ ಸುಮಾ ಎಂಬಾಕೆ ಸೋಮಶೇಖರ್ ಎಂಬುವರ ಜತೆಯಲ್ಲಿ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ತಿಳಿದಿತ್ತು ಎನ್ನಲಾಗಿದೆ. ಇವರ ಜತೆಗೆ, ದೊಡ್ಡತಾಯಮ್ಮ, ವಿಜಯ್ ಕುಮಾರ್ , ಪಲ್ಲವಿ ಎಂಬುವವರು ಪ್ರಚೋದಿತ ಮಾತುಗಳಿಂದ ನಿಂದಿಸುತ್ತಿದ್ದರಿಂದ ಬೇಸತ್ತು ನೇಣಿಗೆ ಶರಣಾಗಿರುವುದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಮೃತದೇಹವನ್ನು ಒಪ್ಪಿಸಲಾಗಿದ್ದು, ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.